Dr g parameshwar
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಮಹೇಶ್ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಬಳಿಕ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಷಯ ಪ್ರಸ್ತಾಪ ಮಾಡಿ, ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡುವ ವೇಳೆ ಒಬ್ಬ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ 28 ಕೊಲೆ ಮಾಡಿದ್ದಾರೆ ಎಂದಿದ್ದಾರೆ. ಇದನ್ನು ಕೇಳಿದ ಬಳಿಕವೂ ಕ್ರಮ ಕೈಗೊಳ್ಳದಿದ್ದರೆ ಹೇಗೆ? ಸರ್ಕಾರ ಇಷ್ಟೊಂದು ನಿಷ್ಕ್ರಿಯವಾಗಬೇಕೆ ಎಂದು ಪ್ರಶ್ನಿಸಿದರು.
ಇದಕ್ಕೆ ದನಿಗೂಡಿಸಿದ ಬಿಜೆಪಿಯ ಸುನೀಲ್‌ಕುಮಾರ್, ಸುರೇಶ್‌ಕುಮಾರ್, ಅರಗ ಜ್ಞಾನೇಂದ್ರ ಮತ್ತಿತರರು ಮುಖ್ಯಮಂತ್ರಿ ಕೊಲೆಗಾರ ಎಂದು ಹೇಳಿರುವುದು ಈ ಸದನಕ್ಕೆ ಮಾಡಿದ ಅಪಮಾನ. ಇದನ್ನು ಸಲ್ಲಿಸಲು ಸಾಧ್ಯವಿಲ್ಲ. ಆತನ ಹೇಳಿಕೆಗಳ ಬಗ್ಗೆ ತನಿಖೆ ನಡೆಸಲು ಮತ್ತೊಂದು ಎಸ್‌ಐಟಿ ಮಾಡಿ ಎಂದು ಆಗ್ರಹಿಸಿದರು.
ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಈ ರೀತಿ ಹೇಳಿಕೆ ನೀಡಿದ ವ್ಯಕ್ತಿಯ ಹೆಸರನ್ನು ಈ ಸದನದಲ್ಲಿ ಹೇಳಿ ಆತನನ್ನು ದೊಡ್ಡವನನ್ನಾಗಿ ಮಾಡಬೇಡಿ. ಆತ ಮುಖ್ಯಮಂತ್ರಿಯವರ ಬಗ್ಗೆ ಅಷ್ಟೇ ಅಲ್ಲ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧವಾಗಿಯೂ ಮಾತನಾಡಿದ್ದಾನೆ. ಈ ಬಗ್ಗೆ ಸಿಎಂಗೆ ಮಾಹಿತಿ ಇರಲಿಲ್ಲ. ನಾನೇ ಹೋಗಿ ಅವರಿಗೆ ವಿವರಿಸಿದ್ದೇನೆ. ಅವರು ತಕ್ಷಣ ಗೃಹಸಚಿವರಿಗೆ ಸೂಚನೆ ನೀಡಿದ್ದಾರೆ. ಗೃಹಸಚಿವರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಆತ ಏನು ಹೇಳಿದ್ದಾನೆ? ಏಕೆ ಹೇಳಿದ್ದಾನೆ ಮತ್ತು ನನ್ನ ಬಗ್ಗೆ ಏನು ಮಾತನಾಡಿದ್ದಾನೆ ಎಂಬ ಎಲ್ಲಾ ಅರಿವು ನನಗೆ ಇದೆ ಎಂದರು.
ಆರ್.ಅಶೋಕ್ ಅವರು ಮಧ್ಯಪ್ರವೇಶಿಸಿ ಆತ ಹೇಳಿಕೆ ನೀಡಿ 48 ಗಂಟೆಯಾಗಿದೆ. ಸರ್ಕಾರ ಇನ್ನು ಕ್ರಮ ಕೈಗೊಂಡಿಲ್ಲ. ಡಿ.ಕೆ.ಶಿವಕುಮಾರ್ ಅವರು ಬೇರೆ ಎಲ್ಲ ವಿಚಾರಗಳ ಬಗ್ಗೆ ತೊಡೆ ತಟ್ಟುತ್ತಾರೆ. ಆದರೆ ಸಿದ್ದರಾಮಯ್ಯ ಅವರನ್ನು ಕೊಲೆಗಾರ ಎಂದಿರುವುದಕ್ಕೆ ಅಷ್ಟು ದೊಡ್ಡದಾಗಿ ಮಾತನಾಡದೇ ಇರುವುದು ಅಚ್ಚರಿಯಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಒಟ್ಟಾರೆ ಚರ್ಚೆಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ಸರ್ಕಾರ ಅಷ್ಟೊಂದು ಅಸಹಾಯಕವಾಗಿಲ್ಲ. ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಹತ್ತಾರು ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಎಫ್‌ಐಆರ್ ದಾಖಲು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…