ಬೆಂಗಳೂರು: ಮಹಾರಾಷ್ಟ್ರದಲ್ಲಿ ಮಾದಕ ದ್ರವ್ಯ, ಗಾಂಜಾ ಶೇಖರಣಾ ಅಡ್ಡೆ ಮೇಲೆ ದಾಳಿಗೆ ಹೋಗಿ ತೀವ್ರ ಹಲ್ಲೆಗೊಳಗಾಗಿರುವ ಪೊಲೀಸ್ ಅಧಿಕಾರಿ ಶ್ರೀಮಂತ ಇಲ್ಲಾಲ ಅವರಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಚಿವರು, ಮಾರಣಾಂತಿಕ ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿ ಶ್ರೀಮಂತ ಇಳ್ಳಾಲ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಅವಶ್ಯ ಬಿದ್ದಲ್ಲಿ ಬೆಂಗಳೂರು ಅಥವಾ ಹೈದರಾಬಾದ್ ಗೆ ಏರ್ಲಿಫ್ಟ್ ಮೂಲಕ ಸ್ಥಳಾಂತರಿಸಲು ಸೂಚಿಸಿದ್ದಾರೆ.
ಹಲ್ಲೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.