CM will resolve the MLAs' dissatisfaction: Minister G. Parameshwara
ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ಸತ್ಯಾಂಶವನ್ನು ಜನಸಮುದಾಯಕ್ಕೆ ತಿಳಿಸುವುದು ಸರ್ಕಾರದ ಉದ್ದೇಶ. ಅದರ ಹೊರತಾಗಿ ನಮ್ಮ ಬಳಿ ಯಾವುದೇ ಗುಪ್ತ ಕಾರ್ಯ ಸೂಚಿಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆ ಗಂಭೀರ ಸ್ವರೂಪದಲ್ಲಿ ನಡೆಯುತ್ತಿದೆ. ಕೋಟ್ಯಂತರ ಭಕ್ತರ ಭಾವನೆಗಳಿಗೆ ಅನುಗುಣವಾಗಿ ಎಸ್‌ಐಟಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿದೆ ಎಂದರು.
ಚಿನ್ನಯ್ಯನ ಬಂಧನದ ಬಳಿಕ ಆತ ನೀಡಿದ ಹೇಳಿಕೆ ಹಾಗೂ ಬೆಳವಣಿಗೆಗಳ ಮೇಲೆ ತನಿಖೆ ಮುಂದುವರೆಯುತ್ತಿದೆ. ಆದಷ್ಟು ಶೀಘ್ರವಾಗಿ ಇದು ಪೂರ್ಣಗೊಂಡು ವರದಿ ಮಂಡನೆಯಾಗಬೇಕು. ಜನರಿಗೆ ಸತ್ಯಾಂಶ ತಿಳಿಯಬೇಕು ಎಂಬುವುದು ನಮ್ಮ ಉದ್ದೇಶ ಎಂದರು.
ಎಸ್‌ಐಟಿ ರಚಿಸಿದ್ದು, ಹೂತಿಡಲಾದ ಶವಗಳ ತನಿಖೆ ಮಾಡಲು ಈಗ ಅದಕ್ಕೆ ವಿರುದ್ಧವಾಗಿ ಚಿನ್ನಯ್ಯನನ್ನು ಬಂಧಿಸಿ ತನಿಖೆ ಮಾಡಲಾಗುತ್ತಿದೆ ಎಂಬ ಆರೋಪಗಳು ಸರಿಯಲ್ಲ. ನಾವು ಯಾವುದೇ ಪೂರ್ವಗ್ರಹ ಪೀಡಿತರಾಗಿಲ್ಲ. ಎಸ್‌ಐಟಿ ಅಧಿಕಾರಿಗಳು ಇದೇ ರೀತಿಯ ತನಿಖೆ ಮಾಡಬೇಕು, ಇಂತವರ ಮೇಲೆ ದಾಳಿ ಮಾಡಬೇಕು ಎಂದು ನಾವು ಸೂಚನೆ ನೀಡಿಲ್ಲ.
ಈಗಾಗಲೇ ನೀಡಲಾಗಿರುವ ಕಾರ್ಯಸೂಚಿಯ ಇತಿಮಿತಿಯಲ್ಲಿ ಎಸ್‌ಐಟಿ ಅಧಿಕಾರಿಗಳು ಎಲ್ಲೆಲ್ಲಿ ಶೋಧ ಮಾಡಬೇಕು, ಯಾರನ್ನು ಬಂಧಿಸಬೇಕು, ಎಲ್ಲಿ ದಾಳಿ ಮಾಡಬೇಕೆಂಬುದನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…