ರಾಜ್ಯ

ಎಸ್‌‍ಐಟಿ ತನಿಖೆ ಗಂಭೀರ ಸ್ವರೂಪದಲ್ಲಿ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ಸತ್ಯಾಂಶವನ್ನು ಜನಸಮುದಾಯಕ್ಕೆ ತಿಳಿಸುವುದು ಸರ್ಕಾರದ ಉದ್ದೇಶ. ಅದರ ಹೊರತಾಗಿ ನಮ್ಮ ಬಳಿ ಯಾವುದೇ ಗುಪ್ತ ಕಾರ್ಯ ಸೂಚಿಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌‍ಐಟಿ ತನಿಖೆ ಗಂಭೀರ ಸ್ವರೂಪದಲ್ಲಿ ನಡೆಯುತ್ತಿದೆ. ಕೋಟ್ಯಂತರ ಭಕ್ತರ ಭಾವನೆಗಳಿಗೆ ಅನುಗುಣವಾಗಿ ಎಸ್‌‍ಐಟಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿದೆ ಎಂದರು.

ಚಿನ್ನಯ್ಯನ ಬಂಧನದ ಬಳಿಕ ಆತ ನೀಡಿದ ಹೇಳಿಕೆ ಹಾಗೂ ಬೆಳವಣಿಗೆಗಳ ಮೇಲೆ ತನಿಖೆ ಮುಂದುವರೆಯುತ್ತಿದೆ. ಆದಷ್ಟು ಶೀಘ್ರವಾಗಿ ಇದು ಪೂರ್ಣಗೊಂಡು ವರದಿ ಮಂಡನೆಯಾಗಬೇಕು. ಜನರಿಗೆ ಸತ್ಯಾಂಶ ತಿಳಿಯಬೇಕು ಎಂಬುವುದು ನಮ್ಮ ಉದ್ದೇಶ ಎಂದರು.

ಎಸ್‌‍ಐಟಿ ರಚಿಸಿದ್ದು, ಹೂತಿಡಲಾದ ಶವಗಳ ತನಿಖೆ ಮಾಡಲು ಈಗ ಅದಕ್ಕೆ ವಿರುದ್ಧವಾಗಿ ಚಿನ್ನಯ್ಯನನ್ನು ಬಂಧಿಸಿ ತನಿಖೆ ಮಾಡಲಾಗುತ್ತಿದೆ ಎಂಬ ಆರೋಪಗಳು ಸರಿಯಲ್ಲ. ನಾವು ಯಾವುದೇ ಪೂರ್ವಗ್ರಹ ಪೀಡಿತರಾಗಿಲ್ಲ. ಎಸ್‌‍ಐಟಿ ಅಧಿಕಾರಿಗಳು ಇದೇ ರೀತಿಯ ತನಿಖೆ ಮಾಡಬೇಕು, ಇಂತವರ ಮೇಲೆ ದಾಳಿ ಮಾಡಬೇಕು ಎಂದು ನಾವು ಸೂಚನೆ ನೀಡಿಲ್ಲ.

ಈಗಾಗಲೇ ನೀಡಲಾಗಿರುವ ಕಾರ್ಯಸೂಚಿಯ ಇತಿಮಿತಿಯಲ್ಲಿ ಎಸ್‌‍ಐಟಿ ಅಧಿಕಾರಿಗಳು ಎಲ್ಲೆಲ್ಲಿ ಶೋಧ ಮಾಡಬೇಕು, ಯಾರನ್ನು ಬಂಧಿಸಬೇಕು, ಎಲ್ಲಿ ದಾಳಿ ಮಾಡಬೇಕೆಂಬುದನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago