CM will resolve the MLAs' dissatisfaction: Minister G. Parameshwara
ಬೆಂಗಳೂರು: ಸಂವಿಧಾನದಿಂದ ಜಾತ್ಯಾತೀತ ಪದ ಬಿಡಬೇಕು ಎಂಬ ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯೇ ಅಪ್ರಸ್ತುತವಾದುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸರಿಯಲ್ಲ. ಭಾರತದ ಸಂವಿಧಾನ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ರಚನೆ ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್‌ರವರು ಬೇರೆ ಬೇರೆ ರಾಷ್ಟ್ರಗಳ ಸಂವಿಧಾನವನ್ನು ಪರಿಶೀಲಿಸಿ ಭಾರತದ ಪರಿಸ್ಥಿತಿ ಹಾಗೂ ವಿವಿಧ ಪದರಗಳನ್ನು ಅರ್ಥೈಸಿಕೊಂಡು ಜಾತ್ಯಾತೀತ ಪದವನ್ನು ಅಳವಡಿಸಿದ್ದಾರೆ ಎಂದರು.
1957ರಿಂದಲೂ ಈವರೆಗೂ ಭಾರತೀಯರಾದ ನಾವು ಸಂವಿಧಾನವನ್ನು ಪಾಲನೆ ಮಾಡಿಕೊಂಡು ಬಂದಿದ್ದೇವೆ. ಇದೊಂದು ಟೈಮ್ ಟೆಸ್ಟೆಡ್ ಸಂವಿಧಾನ. ಯಾವುದೇ ರೀತಿಯ ತೊಂದರೆ ಇಲ್ಲದಂತೆ ನಡೆದುಕೊಂಡು ಬರುತ್ತಿದೆ. ಹಾಗೆಯೇ ಮುಂದುವರೆಯಬೇಕೂ ಕೂಡ ಎಂದರು.
ಎಲ್ಲರಿಗೂ ಸಮಾನ ಅವಕಾಶ ಸಿಕ್ಕಿ, ಮುಕ್ತ ಅವಕಾಶ ಸಿಗಬೇಕು ಎಂಬುದು ಜಾತ್ಯತೀತತೆಯ ಅರ್ಥವಾಗಿದೆ. ಹೊಸಬಾಳೆಯವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ವಿಶ್ವದಲ್ಲೇ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಕಾರಗೊಳಿಸಿದ ಸಂವಿಧಾನ ಭಾಷೆ, ಸಂಸ್ಕೃತಿ, ಧರ್ಮದ ವಿಭಿನ್ನತೆ ನಡುವೆ ನಮ್ಮನ್ನು ಏಕತೆಯಿಂದ ಬದುಕುವಂತೆ ಮಾಡಿದೆ. ಇದನ್ನು ಬದಲಾವಣೆ ಮಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ ಎಂದು ಹೇಳಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…