ರಾಜ್ಯ

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ ; ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರಸಂಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.

ಸಂಘದ ಕಾನೂನುಬದ್ಧ ಸ್ಥಾನಮಾನ, ಸಂಘಟನಾ ರಚನೆ, ಹಣಕಾಸು ಮೂಲಗಳು ಹಾಗೂ ಸಾರ್ವಜನಿಕ ಉತ್ತರದಾಯಿತ್ವಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳ ಕುರಿತು ಸ್ಪಷ್ಟನೆ ನೀಡುವಂತೆ ಮನವಿ ಮಾಡಿದ್ದಾರೆ. ಆರ್‌ಎಸ್‌ಎಸ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿರುವ ಸಚಿವರು, ದೇಶದ ಸಾರ್ವಜನಿಕ ಜೀವನದಲ್ಲಿ ಮಹತ್ವದ ಪ್ರಭಾವ ಮತ್ತು ವ್ಯಾಪಕ ಜಾಲ ಹೊಂದಿರುವ ಯಾವುದೇ ಸಂಸ್ಥೆಯು ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ಸಂವಿಧಾನಬದ್ಧತೆಯ ಉನ್ನತ ಮಾನದಂಡಗಳನ್ನು ಪಾಲಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಖಿಲ ಭಾರತೀಯ ಪ್ರತಿನಿಧಿ ಸಭೆ (ಎಬಿಪಿಎಸ್) ಬಿಡುಗಡೆ ಮಾಡಿರುವ 2025-26ರ ವರದಿಯನ್ನು ಉಲ್ಲೇಖಿಸಿರುವ ಅವರು, ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ಗೆ ಸಾವಿರಾರು ಶಾಖೆಗಳು, ವಾರದ ಮಿಲನಗಳು ಮತ್ತು ಮಾಸಿಕ ಮಂಡಲಿಗಳಿದ್ದು, ಲಕ್ಷಾಂತರ ಜನರನ್ನು ಒಳಗೊಂಡ ಸಾರ್ವಜನಿಕ ಕಾರ್ಯಕ್ರಮಗಳು, ಸಮಾವೇಶಗಳು ಹಾಗೂ ಪಥಸಂಚಲನಗಳನ್ನು ಆಯೋಜಿಸುತ್ತಿರುವುದಾಗಿ ಹೇಳಿಕೊಂಡಿದೆ ಎಂದು ಉಲ್ಲೇಖಿಸಿದ್ದಾರೆ.

ಇಂತಹ ವ್ಯಾಪಕ ಚಟುವಟಿಕೆಗಳನ್ನು ನಡೆಸುವ ಸಂಘಟನೆಯು ತನ್ನ ಕಾನೂನುಬದ್ಧ ಸ್ಥಾನಮಾನ, ಅಧಿಕಾರಿಗಳು, ಆದಾಯದ ಮೂಲಗಳು, ವೆಚ್ಚ ಮತ್ತು ಆಸ್ತಿ ವಿವರಗಳು, ತೆರಿಗೆ ಪಾವತಿ ಸ್ಥಿತಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಪಡೆದಿರುವ ಅನುಮತಿಗಳ ಕುರಿತು ಮಾಹಿತಿ ನೀಡಬೇಕೆಂಬುದು ಸಹಜ ಮತ್ತು ನ್ಯಾಯಸಮ್ಮತ ನಿರೀಕ್ಷೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಪತ್ರದಲ್ಲಿ ಸಚಿವರು ಈ ಕೆಳಗಿನ ವಿಷಯಗಳ ಕುರಿತು ಮಾಹಿತಿ ಬಹಿರಂಗಪಡಿಸುವಂತೆ ಕೋರಿದ್ದಾರೆ

ಸಂಘಟನೆಯ ಕಾನೂನುಬದ್ಧ ಸ್ಥಾನಮಾನ ಮತ್ತು ಸಂಘಟನಾ ರಚನೆ
* ಪದಾಧಿಕಾರಿಗಳು ಮತ್ತು ಅಧಿಕೃತ ಪ್ರತಿನಿಧಿಗಳ ವಿವರಗಳು.
* ದೇಣಿಗೆ, ಕೊಡುಗೆ ಹಾಗೂ ಇತರೆ ಆದಾಯದ ಮೂಲಗಳು.
* ವೆಚ್ಚ ಮತ್ತು ಆಸ್ತಿಗಳ ವಿವರಗಳು.
* ಅನ್ವಯವಾಗುವ ತೆರಿಗೆಗಳನ್ನು ಕಾನೂನುಬದ್ಧವಾಗಿ ಪಾವತಿಸಲಾಗುತ್ತಿದೆಯೇ ಎಂಬ ಮಾಹಿತಿ.
* ಅಧಿಕೃತ ನೋಂದಣಿ ಇಲ್ಲದೆ ಚಟುವಟಿಕೆಗಳನ್ನು ನಡೆಸುತ್ತಿರುವ ಕಾನೂನು ಆಧಾರ.
* ಸಾರ್ವಜನಿಕ ಉತ್ತರದಾಯಿತ್ವವಿಲ್ಲದೆ ಇಷ್ಟೊಂದು ವ್ಯಾಪಕವಾಗಿ ಕಾರ್ಯನಿರ್ವಹಿಸುವ ಹಕ್ಕು ಯಾವ ಕಾನೂನು ಅಥವಾ ಸಂವಿಧಾನಾತ್ಮಕ ಚೌಕಟ್ಟಿನಡಿ ದೊರೆತಿದೆ ಎಂಬ ವಿವರ.
* ಸಾರ್ವಜನಿಕ ಸಭೆಗಳು, ಪಥಸಂಚಲನಗಳು ಹಾಗೂ ಇತರೆ ಸಂಘಟಿತ ಕಾರ್ಯಕ್ರಮಗಳಿಗೆ ಪಡೆದಿರುವ ಅನುಮತಿ ಮತ್ತು ಅನುಸರಣೆ ವ್ಯವಸ್ಥೆಗಳ ಮಾಹಿತಿ.

ಭಾರತದ ಸಂವಿಧಾನಾತ್ಮಕ ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ಕಾನೂನಿನ ವ್ಯಾಪ್ತಿಯಿಂದ ಹೊರತಾಗಿರಲು ಸಾಧ್ಯವಿಲ್ಲ. ಸಾಮಾನ್ಯ ನಾಗರಿಕರು, ಸ್ವಯಂಸೇವಾ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಟ್ರಸ್ಟ್‌ಗಳು ಮತ್ತು ಕಂಪನಿಗಳು ಪಾಲಿಸಬೇಕಾದ ನಿಯಮಗಳು ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವವನ್ನು ಕೇವಲ ಸಂಭ್ರಮಾಚರಣೆಯಾಗಿ ಮಾತ್ರವಲ್ಲದೆ, ಸಂವಿಧಾನಾತ್ಮಕ ಆತ್ಮಪರಿಶೀಲನೆಯ ಅವಕಾಶವಾಗಿಯೂ ಬಳಸಿಕೊಳ್ಳಬೇಕು. ತನ್ನ ಚಟುವಟಿಕೆಗಳು, ಹಣಕಾಸು ವ್ಯವಹಾರಗಳು ಮತ್ತು ಕಾನೂನುಬದ್ಧ ಸ್ಥಿತಿಗತಿಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೂಲಕ ಪಾರದರ್ಶಕ ಮತ್ತು ಉತ್ತರದಾಯಿ ಸಂಸ್ಥೆಯಾಗಿ ಮಾದರಿ ಸ್ಥಾಪಿಸಬೇಕು ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

ಸಂಬಂಧಿತ ವಿಷಯಗಳ
ಕುರಿತು ಚರ್ಚೆ ನಡೆಸಲು ಆರ್‌ಎಸ್‌ಎಸ್ ತನ್ನ ಅಧಿಕೃತ ಪ್ರತಿನಿಧಿಗಳನ್ನು ನಿಯೋಜಿಸಿ, ಲಿಖಿತ ಉತ್ತರ ನೀಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಕೇಳಿದ್ದಾರೆ

ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ, ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕು. ಈ ಸಂಬಂಧ ನಾವು ನಿಮ್ಮ ಅಧಿಕೃತ ಚರ್ಚೆಗೆ ಸಿದ್ದರಿದ್ದೇವೆ. ನಿಮ್ಮ ಅಧಿಕೃತ ಪ್ರತಿನಿಧಿಗಳನ್ನು ಕಳುಹಿಸುವ ಬಗ್ಗೆ ಪ್ರತಿಕ್ರಿಯೆ
ನಿರೀಕ್ಷಿಸುತ್ತೇವೆ ಎಂದು ಪತ್ರದಲ್ಲಿ ಬರೆದಿದ್ದಾರೆ.

 

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ, ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕು. ಭಾರತದ ಈ ನೂರನೇ ವರ್ಷದಲ್ಲಿ ದೇಶಕ್ಕೆ ಆರ್‌ಎಸ್‌ಎಸ್ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದುತನ್ನ ಚಟುವಟಿಕೆಗಳು, ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು. ಜೊತೆಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಪ್ರಿಯಾಂಕ್ ಹೇಳಿದ್ದಾರೆ.

ದೇಶದ ಕಾನೂನಿಗೆ ಬದ್ಧವಾಗಿರಬೇಕು

ರಾಷ್ಟ್ರೀಯತೆ, ಶಿಸ್ತು, ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಆರ್‌ಎಸ್‌ಎಸ್‌, ಪಾರದರ್ಶಕತೆ, ಕಾನೂನು ಪಾಲನೆ, ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ನಿಯಮಗಳನ್ನ ಪಾಲಿಸಬೇಕೆನ್ನುವ ಆರ್‌ಎಸ್‌ಎಸ್‌ ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಇಲ್ಲ ಅಂತ ಪ್ರಿಯಾಂಕ್ ಹೇಳಿದ್ದಾರೆ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಅಂತ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

42 mins ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

49 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

51 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

54 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

56 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

59 mins ago