ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಿದೆ.ಕಾನೂನು ಜಾರಿ ಬಗ್ಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ನು ಮುಂದೆ ದಾಖಲಾಗುವ ಕೇಸ್ ಗಳಿಗೆ ಇದು ಅನ್ವಯವಾಗಲಿದೆ. ಇದರ ಪರಿಣಾಮ ಏನು ಅಂತಾ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸೆಕ್ಷನ್ ಬಗ್ಗೆ ಗೊತ್ತಾಗುತ್ತದೆ. ಹೊಸ ಕಾನೂನು ಬಗ್ಗೆ ಕಾನ್ಸ್ ಟೇಬಲ್ ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ.ಇಡೀ ದೇಶದಲ್ಲಿ ಮೂರು ಕಾನೂನು ಜಾರಿಯಾಗಿವೆ.ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡುಬಹುದು ಎಂದು ಹೇಳಿದರು.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…