ರಾಜ್ಯ

ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ.

ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನಃ ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು.

ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ಆಂದೋಲನ ಡೆಸ್ಕ್

Recent Posts

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 mins ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

31 mins ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

37 mins ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

1 hour ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

1 hour ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

2 hours ago