ಕೋಲಾರ: ಹನಿಟ್ರ್ಯಾಪ್ ತನಿಖೆ ಸಿಎಂಗೆ ಬಿಟ್ಟಿದ್ದು. ಆದರೆ, ಹನಿಟ್ರ್ಯಾಪ್ ಆರೋಪ ಮುಂದೆಯೂ ಬರಬಹುದು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವಾಗಿ ವಿಧಾನಸಭೆಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಿದ್ದೇನೆ. ಅದನ್ನೂ ಹೊರತು ಪಡಿಸಿ ಹೇಳುವ ಆಗಿಲ್ಲ. ಇದರ ಬಗ್ಗೆ ತನಿಖೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟಿದ್ದು. ಈ ಆರೋಪ ಮೊದಲೂ ಅಲ್ಲ, ಕೊನೆಯೂ ಅಲ್ಲ ಮುಂದೆ ಬಂದರು ಬರಬಹುದು ಎಂದು ಹೇಳಿದರು.
ಇನ್ನು ಹನಿಟ್ರ್ಯಾಪ್ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿದಿನವೂ ಅವರ ಜೊತೆ ಮಾತನಾಡುವೆ ಎಂದು ತಿಳಿಸಿದರು.
ಇನ್ನು ಸ್ಪೀಕರ್ ಪೀಠಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಾನಾಗಿದ್ದರೆ ಮುಂಚಿತವಾಗಿ ಈ ಕೆಲಸ ಮಾಡುತ್ತಿದ್ದೆ. ಬಜೆಟ್‌ಗೆ ಸಂಬಂಧಪಟ್ಟಂತೆ ವಿರೋಧ ಪಕ್ಷದ ಶಾಸಕರ ಪ್ರಶ್ನೆಗೆ ಸಿಎಂ ಉತ್ತರ ಕೊಡುವ ಸಂದರ್ಭದಲ್ಲಿ ಆಡಚಣೆ ಉಂಟುಮಾಡಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ. ನಾನು ಸ್ಪೀಕರ್ ಆಗಿದ್ದರೆ ಮೊದಲೇ ಸಸ್ಪೆಂಡ್ ಮಾಡುತ್ತಿದ್ದೆ ಎಂದು ನುಡಿದರು.
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…