Mysore
18
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಹನಿಟ್ರ್ಯಾಪ್‌ ಬಗ್ಗೆ ರಾಜಣ್ಣ ಹೇಳಿದ ಎಲ್ಲವನ್ನೂ ನಿಮ್ಮ ಮುಂದೆ ಬಿಚ್ಚಿಡಲು ಸಾಧ್ಯವಿಲ್ಲ ಎಂದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹನಿಟ್ರ್ಯಾಪ್‌ ಬಗ್ಗೆ ರಾಜಣ್ಣ ನನ್ನ ಬಳಿಯೂ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಆದರೆ ಆ ಎಲ್ಲಾ ವಿಚಾರಗಳನ್ನು ನಿಮ್ಮ ಮುಂದೆ ಹೇಳಲು ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನನ್ನನ್ನು ಭೇಟಿ ಮಾಡಿ ಹೋಗಿದ್ದಾರೆ. ಭೇಟಿ ವೇಳೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಆದರೆ ಆ ವಿಚಾರಗಳನ್ನು ನಾವು ನಿಮ್ಮ ಮುಂದೆ ಹೇಳಲು ಆಗುವುದಿಲ್ಲ ಎಂದರು.

ಇನ್ನು ಮಂದುವರಿದು ಮಾತನಾಡಿದ ಅವರು, ಹನಿಟ್ರ್ಯಾಪ್‌ ಬಗ್ಗೆ ತನಿಖೆ ನಡೆಯುವುದರ ಕುರಿತು ಸಿಎಂ ಹಾಗೂ ಎಲ್ಲಾ ಸಚಿವರು ಕೂತು ಚರ್ಚೆ ಮಾಡುತ್ತೇವೆ. ಈ ಘಟನೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

 

Tags:
error: Content is protected !!