Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಹನಿಟ್ರ್ಯಾಪ್‌ ಪ್ರಕರಣ: ಸಿಐಡಿಗೆ ಹಸ್ತಾಂತರ

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸಚಿವರ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ.

ಈ ಕುರಿತು ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮೂರು ಪುಟಗಳ ದೂರನ್ನು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸ್‌ ಮಹಾನಿರ್ದೇಶಕ ಆಲೋಕ್‌ ಮೋಹನ್‌ ಪ್ರಕರಣವನ್ನು ಸಿಐಡಿಗೆ ತನಿಖೆಗೆ ಆದೇಶಿಸಿದ್ದಾರೆ.

ಸಿಐಡಿ ಅಧಿಕಾರಿಗಳು ಈಗಾಗಲೇ ತಮ್ಮ ಅಧೀಕೃತ ನಿವಾಸಕ್ಕೆ ಭೇಟಿ ನೀಡಿ ಮನೆಯ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಅವರು ತಿಳಿಸಿದ್ದಾರೆ.

ಸಚಿವ ಕೆ.ಎನ್‌ ರಾಜಣ್ಣ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಮೇಲೆ ಹನಿಟ್ರ್ಯಾಪ್‌ ಯತ್ನ ಆಗಿದೆ ಎಂದು ಹೇಳಿದ್ದರು. ಅಲ್ಲದೇ 48ಕ್ಕೂ ಹೆಚ್ಚು ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್‌ ಆಗಿದೆ ಎಂದು ಹೇಳಿಕೆ ನೀಡಿದ್ದರು. ಪ್ರಕರಣ ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ವಿಪಕ್ಷ ನಾಯಕರು ಆಗ್ರಹಿಸಿದ್ದರು.

Tags: