ರಾಜ್ಯ

ಹನಿಟ್ರ್ಯಾಪ್‌ ಪ್ರಕರಣ: ಸಚಿವ ಕೆ.ಎನ್‌.ರಾಜಣ್ಣಗೆ ಬಿಗಿ ಭದ್ರತೆ

ಕೋಲಾರ: ಇಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಚಿವ ಕೆ.ಎನ್‌.ರಾಜಣ್ಣ ಅವರು ಇಂದು ನಗರಕ್ಕೆ ಭೇಟಿ ನೀಡಿದ್ದು, ಅವರಿಗೆ ಹನಿಟ್ರ್ಯಾಪ್‌ ಪ್ರಕರಣದ ಹಿನ್ನೆಲೆಯಲ್ಲಿ ಕೋಲಾರ ನಗರ ಪೊಲೀಸ್‌ ಇಲಾಖೆಯೂ ಬಿಗಿ ಭದ್ರತೆಯನ್ನು ಆಯೋಜಿಸಿದೆ.

ಈ ವೇಳೆ ನಗರದಲ್ಲಿ ಇಂದು(ಮಾರ್ಚ್.‌22) ಹನಿಟ್ರ್ಯಾಪ್‌ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, ನಾನು ಈಗಾಗಲೇ ಏನೇನೂ ಹೇಳೇಬೇಕೋ ಅದೆನ್ನೆಲ್ಲಾನ್ನೂ ವಿಧಾನಸಭೆಯ ಸದನದಲ್ಲಿ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಹೇಳುವಂತಹದ್ದು ಏನೂ ಇಲ್ಲ. ಇಂತಹ ಪ್ರಕರಣಗಳು ಇದೇ ಮೊದಲು ಅಲ್ಲ ಅಥವಾ ಕೊನೆಯೂ ಅಲ್ಲ. ನಿರಂತರವಾಗಿ ನಡೆಯುತ್ತಿರುತ್ತವೆ ಎಂದರು.

ಇದೇ ಸಂದರ್ಭದಲ್ಲಿ ವಿಪಕ್ಷದ 18 ಶಾಸಕರನ್ನು ಅಮಾನತುಗೊಳಿಸಿದರ ಬಗ್ಗೆ ಮಾತನಾಡಿದ ಅವರು, ವಿಧಾನಸೇ ಅಧಿವೇಶನದಲ್ಲಿ ಶುಕ್ರವಾರ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆ ತರುವತಂಹದ್ದು. ಜನಪರವಾದ ವಿಚಾರದಲ್ಲಿ ಗಲಾಟೆ ನಡೆದಿದ್ದರೆ ಒಪ್ಪುವಂತಹದಾಗಿದೆ. ಆದರೆ ವಿರೋಧ ಪಕ್ಷದವರು ಬಜೆಟ್‌ ಮೇಲಿನ ಉತ್ತರಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಈ ಘಟನೆಯೊಂದು ಪೂರ್ವಯೋಜಿತ ಪಿತೂರಿ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

46 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

2 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

2 hours ago