ರಾಜ್ಯ

ಹನಿಟ್ರ್ಯಾಪ್‌ ಪ್ರಕರಣ : ಕೊನೆಗೂ ದೂರು ನೀಡಿದ ಕೆ.ಎನ್ ರಾಜಣ್ಣ

ಬೆಂಗಳೂರು :  ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು‌ ಅಂತಿಮವಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ದೂರು ನೀಡಿದ್ದಾರೆ.

ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ದೂರು ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್‌ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ‌ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ, ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. ಈ ದಿನ ಮನವಿ ನೀಡಿದ್ದಾರೆ. ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ‌ ಜಿ.ಪರಮೇಶ್ವರ ಅವರು ತಿಳಿಸಿದರು.

ಸದನದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ಮನವಿ ನೀಡಿದ್ದಾರೆ. ಇದರ ಆಧಾರದ ಮೇಲೆ ಮುಂದೆ ಏನು ಮಾಡಬೇಕು ಎಂಬುದನ್ನು ಕಾನೂನು ತಜ್ಞರ ಜೊತೆ ಚರ್ಚಿಸುತ್ತೇನೆ. ಸಚಿವ ರಾಜಣ್ಣ ಅವರು ನೀಡಿರುವ ಮನವಿಯಲ್ಲಿರುವ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂದರು.

ಪೂರ್ವನಿಯೋಜಿತ ಕಾರ್ಯಕ್ರಮಗಳಿದ್ದ ಹಿನ್ನೆಲೆಯಲ್ಲಿ ಮನವಿ ನೀಡಲು ಆಗಿಲ್ಲ ಎಂದು ರಾಜಣ್ಣ ಅವರೇ ಹೇಳಿದ್ದರು. ಈಗ ಮನವಿ ಸಲ್ಲಿಸಿದ್ದಾರೆ. ನಮಗೆ ಎನೆಲ್ಲ ವಿಷಯ ಗೊತ್ತಿದ್ದೆಯೋ ಅದೆಲ್ಲವನ್ನು ಕಾನೂನು ತಜ್ಞರು ಮತ್ತು ಸಿಎಂ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸದನದಲ್ಲಿ ಚರ್ಚೆಯಾಗಿರುವ ಹನಿಟ್ರ್ಯಾಪ್ ಯತ್ನ ವಿಷಯಕ್ಕೆ ಸಂಬಂಧಿಸಿದಂರೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್‌ನ ತೀರ್ಪಿಗಾಗಿ ಕಾಯುವುದಿಲ್ಲ. ಅದನ್ನು ಪ್ರತ್ಯೇಕವಾಗಿ ಪರಿಗಣಿಸುತ್ತೇವೆ ಎಂದರು.

ಹನಿಟ್ರ್ಯಾಪ್ ಯತ್ನ ವಿಷಯ ಸದನದಲ್ಲಿ ಚರ್ಚೆಯಾಗಿರುವುದರಿಂದ ಸುಮೋಟೋ (ಸ್ವಯಂ ಪ್ರೇರಿತ ದೂರು) ದಾಖಲಿಸಲು ಬರುವುದಿಲ್ಲ. ಸ್ಪೀಕರ್ ಅವರು ಸುಮೋಟೋ ದಾಖಲಿಸುವಂತೆ ಸೂಚಿಸಬಹುದಿತ್ತು. ಅವರು ಹೇಳಿದ್ದರೆ ಬೇರೆ ವಿಷಯವಾಗುತ್ತಿತ್ತು. ಆ ರೀತಿ ಆಗಿಲ್ಲ. ವಿಷಯ ಸದನದಲ್ಲಿ ಪ್ರಸ್ತಾಪವಾಗುವ ಮೊದಲು ಸಚಿವ ರಾಜಣ್ಣ ಅವರಾಗಲಿ ಮತ್ತು ಅವರ ಪುತ್ರ ಆರ್.ರಾಜೇಂದ್ರ ಅವರಾಗಲಿ ನನ್ನ ಬಳಿ ಚರ್ಚಿಸಿಲ್ಲ ಎಂದು ಸ್ಪಷ್ಟನೆ‌ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

4 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

4 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

4 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

6 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago