ವಿಜಯಪುರ: ಜನಪ್ರತಿನಿಧಿಗಳ ಭದ್ರತೆಗೆ ಸಿಬಿಐ ಮೂಲಕವೇ ಹನಿಟ್ರ್ಯಾಪ್ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ್ಯಾಪ್ ವಿಚಾರ ಈಗ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ಗೆ ಪತ್ರ ಬರೆದಿರುವ ಶಾಸಕ ಯತ್ನಾಳ್ ಅವರು, ಜನಪ್ರತಿನಿಧಿಗಳನ್ನು ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡಲಾಗುತ್ತಿದೆ. ಆದ್ದರಿಂದ ಜನಪ್ರತಿನಿಧಿಗಳ ಭದ್ರತೆಗಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇನ್ನು ಪತ್ರದಲ್ಲಿ ಹನಿಟ್ಯ್ರಾಪ್ ಪ್ರಕರಣದ ತನಿಖೆ ನಡೆಸಬೇಕು. ಸಿಬಿಐ ಮೂಲಕವೇ ಹನಿಟ್ರ್ಯಾಪ್ ಪ್ರಕರಣದ ತನಿಖೆಯಾಗಲಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





