ಉತ್ತರ ಕನ್ನಡ: ಹೊನ್ನಾವರ ತಾಲ್ಲೂಕಿನ ಸುಳೆಮುರ್ಖಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಇಂದು ಬೆಳಗಿನ ಜಾವ ಕಬ್ಬಿಣದ ಸಾಮಗ್ರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯ ಹಾಗೂ ಇಬ್ಬರು ಮೃತಪಟ್ಟಿದ್ದಾರೆ.
ಈ ದುರ್ಘಟನೆಯೂ ಸಾಗರದಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿಗೆ ಹೊರಟಿದ್ದಾಗ ಸುಳೆಮುರ್ಖಿ ಬಳಿ ಇಂದು(ಜನವರಿ.6) ಬೆಳಗಿನ ಜಾವ ಸಂಭವಿಸಿದ್ದು, ಲಾರಿಯಲ್ಲಿ ಒಟ್ಟು ಆರು ಜನರು ಪ್ರಯಾಣಿಸುತ್ತಿದ್ದರು. ಅದರಲ್ಲಿ ಮೂವರಿಗೆ ಗಂಭೀರ ಗಾಯ ಹಾಗೂ ಇಬ್ಬರು ಮೃತರು ಬಿಹಾರ ರಾಜ್ಯದ ಮೂಲದವರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಪಘಾತ ಸಂಭವಿಸಿದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ಮೂವರು ಗಾಯಾಳುಗಳನ್ನುಹೊನ್ನಾವರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸ್ಥಳವನ್ನು ಪರಿಶೀಲಿಸಿದ್ದಾರೆ. ಈ ಪ್ರಕರಣ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.





