Mysore
17
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ ಹತ್ಯೆಯು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಕ್ರೂರಿ ತಂದೆ ಹಾಗೂ ಆತನ ಕುಟುಂಬಸ್ಥರ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ಈ ಘಟನೆ ನಡೆದಿದ್ದು, ಈ ಕ್ರೂರ ಕೃತ್ಯವನ್ನು ಸಹ ಕೆಲವರು ಸಮರ್ಥಿಸಿಕೊಂಡಿದ್ದಾರೆ. ಹೆತ್ತು ಹೊತ್ತು ಬೆಳೆಸಿದ ಮಗಳು ಈ ರೀತಿ ಮಾರ್ಯದೆ ತೆಗೆದಿದ್ದು ಎಷ್ಟು ಸರಿ ಎಂದು ಕೊಲೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದರೆ ಜಾತಿ ಎಷ್ಟರ ಮಟ್ಟಿಗೆ ನೆತ್ತಿಗೇರಿದೆ ಎಂದು ಗೊತ್ತಾಗುತ್ತದೆ.

ಇದನ್ನು ಓದಿ: ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮರ್ಯಾದೆ ಹತ್ಯೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. ಹೊಡೆದವರಿಗೆ ಹೃದಯವಿಲ್ಲ, ರಾಕ್ಷಸರು ಅವರು ಎಂದು ಕಿಡಿಕಾರಿದ್ದಾರೆ.

ಸರ್ಕಾರ ಕೂಡಾ ಈ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಸ್ವಂತ ಮಗಳು ಗರ್ಭಿಣಿಯಾದ್ರು ತಂದೆ ಕೊಲೆ ಮಾಡಿದ್ದಾನೆ. ಗರ್ಭಿಣಿ ಹೊಟ್ಟೆಗೆ ಕೊಡಲಿ ಹಾಕಿರೋನು ರಾಕ್ಷಸ. ಅವರನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು. ದಲಿತರು ಪ್ರೀತಿನೇ ಮಾಡಬಾರದಾ? ಇಂತಹ ಘಟನೆ ಎಂದಿಗೂ ಆಗದಂತಹ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

Tags:
error: Content is protected !!