Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಪುನರ್ವಸತಿ ಕಾರ್ಯಕರ್ತರ ಗೌರವಧನ 1000ರೂ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

lakshmi hebbalkar

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.

ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧರದ ಮೇರೆಗೆ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಮಾಹಿತಿ ನೀಡಿದರು.

Tags:
error: Content is protected !!