lakshmi hebbalkar
ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.
ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧರದ ಮೇರೆಗೆ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಮಾಹಿತಿ ನೀಡಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…