ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 24ನೇ ವಾರ್ಷಿಕ ಘಟಿಕೋತ್ಸವ ಜುಲೈ. 18 ರಂದು ನಡೆಯಲಿದೆ ಎಂದು ಕುಲಪತಿ ಪ್ರೊ. ಎಸ್ ವಿದ್ಯಾಶಂಕರ್ ಸೋಮವಾರ (ಜು.15) ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜತೆಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಕೂಡಾ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಯಿಂದ ಒಟ್ಟು 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಇದರ ಜೊತೆಯಲ್ಲಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥನ್, ಚಿಕ್ಕಬಳ್ಳಾಪುರದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸಂಸ್ಥಾಪಕ ಮಧುಸೂದನ್ ಸಾಯಿ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ ಮರಾರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದೂ ತಿಳಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…