ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಸತ್ತರೇ ಓರ್ವನಿಗೆ ಗಾಯವಾಗಿದೆ.
ಮೃತರನ್ನು ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಎಂದು ಗುರುತಿಸಲಾಗಿದೆ. ಮೃತರೆಲ್ಲಾರು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ (30ವ) ಪ್ರಾಣಾಪಾಯದಿಂದ ಪಾರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್ನಲ್ಲಿದ್ದವರು ಮೃತಪಟ್ಟಿದ್ದಾರೆ.





