ಬೆಂಗಳೂರು: ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್ ಆದ ದಾರುಣ ಘಟನೆ ನಗರದ ಬೊಮ್ಮಸಂದ್ರ ಫ್ಲೈಓವರ್ ಬಳಿ ನಡೆದಿದೆ.
ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದ್ದು, ಗಾಯಗೊಂಡವರನ್ನು ಕೊಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಂಪತಿ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ದಂಪತಿ ಕೆಳಗೆ ಹಾರಿ ಬಿದ್ದಿದ್ದಾರೆ.
ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದು, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.