ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಪಘಾತದ ನಂತ ಎಕ್ಸ್ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರು ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 2 ಲಕ್ಷರೂ ಮತ್ತು ಗಾಯಗೊಂಡವರಿಗೆ 50,000 ರೂ ಪರಿಹಾರವನ್ನು ಸಹ ಅವರು ಘೋಷಣೆ ಮಾಡಿದ್ದಾರೆ.
ಡಿವೈಡರ್ ದಾಟಿ ಬಂದ ಲಾರಿ ಸೀಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಡಿಕ್ಕಿ ಹೊಡೆದಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಅಪಘಾತದ ಭಯಾನಕ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.





