ರಾಜ್ಯ

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ ಇಟ್ಟು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿ ಬ್ಯಾಡರಹಳ್ಳಿ ನಡೆದಿದೆ. ಈ ಧಾರುಣ ಘಟನೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

‘ವೆಸ್ಟರ್ನ್ ಸ್ಟೈಲ್’ನಲ್ಲಿ ನಿನಗೆ ಪ್ರಪೋಸ್ ಮಾಡ್ತೀನಿ ಎಂದು ನಂಬಿಸಿ, ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ. ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟಕ್ಕೂ ಆಗಿದ್ದೇನು?
ಪೊಲೀಸ್ ಮೂಲಗಳ ಪ್ರಕಾರ ಮೃತ ಕಿರಣ್ ಮತ್ತು ಆರೋಪಿ ಯುವತಿ ಪ್ರೇರಣಾ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಪರಿಚಯವಾಗಿ ಸ್ನೇಹ, ಬಳಿಕೆ ಸ್ನೇಹ ಪ್ರೀತಿಗೆ ತಿರುಗಿದೆ. ಮಂಗಳವಾರ ಪ್ರೇರಣಾ ತನ್ನ ಪ್ರಿಯಕರ ಕಿರಣ್ ನನ್ನು ಮನೆಗೆ ಕರೆದಿದ್ದಳು. ಅಂದು ಆಕೆಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದಿದ್ದನ್ನು ನೋಡಿ ಕಿರಣ್ ಮನೆಗೆ ಬಂದಿದ್ದನು.

ಇದೇ ಸಂದರ್ಭದಲ್ಲಿ ಯುವತಿ ಪ್ರೇರಣಾ ‘ನಿನಗೆ ವಿದೇಶಿ ಶೈಲಿಯಲ್ಲಿ ಪ್ರಪೋಸ್ ಮಾಡ್ತೀನಿ’ ಎಂದು ಹೇಳಿ ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ಕಿರಣ್ ‘ಯಾಕೆ ಇಷ್ಟು ಟೈಟ್ ಆಗಿ ಕಟ್ತಿದ್ದೀಯಾ?’ ಎಂದು ಕೇಳಿದಾಗ, ‘ಇದು ಫಾರಿನ್ ಸ್ಟೈಲ್, ಸುಮ್ಮನಿರು’ ಎಂದು ನಂಬಿಸಿದ್ದಾಳೆ.

ಕಿರಣ್ ಕೈಕಾಲು ಬಿಡಿಸಿಕೊಳ್ಳಲಾಗದೇ ಸಂಪೂರ್ಣ ಅಸಹಾಯಕನಾದ ಮೇಲೆ ಆಕೆ ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಕೃತ್ಯ ನಡೆಯುವ ದೃಶ್ಯವನ್ನು ಯುವತಿ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾಳೆ ಎನ್ನಲಾಗಿದೆ. ಪೊಲೀಸರ ಪ್ರಕಾರ ಯುವತಿ ಪ್ರೇರಣಾ ತನ್ನ ಪ್ರಿಯಕರ ತನ್ನನ್ನು ಬೇಕೆಂದೇ ದೂರವಿಡುತ್ತಿದ್ದಾನೆ ಎಂದು ಅನುಮಾನಗೊಂಡಿದ್ದಳು. ತನಗೆ ಸಮಯ ನೀಡುತ್ತಿಲ್ಲ. ತನ್ನೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ. ತನ್ನ ಪ್ರೀತಿಯನ್ನು ನಿರ್ಲಕ್ಷಿಸುತ್ತಿದ್ದಾನೆ ಎಂದು ಕೋಪಗೊಂಡಿದ್ದಳು. ಇದೇ ಕಾರಣಕ್ಕೆ ಈ ಕೃತ್ಯ ವೆಸಗಿರಬಹುದು ಎಂದು ಶಂಕಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

56 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago