ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಬಳಿ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು ಆಗಿದ್ದಾರೆ.
ಈ ದುರ್ಘಟನೆಯು ಚಿತ್ರದುರ್ಗದಲ್ಲಿ ಮಧ್ಯರಾತ್ರಿ ಸಂಭವಿಸಿದೆ. ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ನಿದ್ದೆಯಲ್ಲಿದ್ದಾಗಲೇ ಸುಟ್ಟು ಕರಕಲಾಗಿದ್ದಾರೆ.
ಕ್ರಿಸ್‌ಮಸ್ ರಜೆಯ ಹಿನ್ನೆಲೆಯಲ್ಲಿ ಕನಸುಗಳನ್ನು ಹೊತ್ತು ಸಾಗಿದ್ದ ಅನೇಕ ಪ್ರಯಾಣಿಕರು ಸಜೀವ ದಹನವಾಗಿದ್ದು, ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




