ರಾಜ್ಯ

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಬಳಿ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಕರಕಲು ಆಗಿದ್ದಾರೆ.

ಈ ದುರ್ಘಟನೆಯು ಚಿತ್ರದುರ್ಗದಲ್ಲಿ ಮಧ್ಯರಾತ್ರಿ ಸಂಭವಿಸಿದೆ. ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ನಿದ್ದೆಯಲ್ಲಿದ್ದಾಗಲೇ ಸುಟ್ಟು ಕರಕಲಾಗಿದ್ದಾರೆ.

ಕ್ರಿಸ್‌ಮಸ್‌ ರಜೆಯ ಹಿನ್ನೆಲೆಯಲ್ಲಿ ಕನಸುಗಳನ್ನು ಹೊತ್ತು ಸಾಗಿದ್ದ ಅನೇಕ ಪ್ರಯಾಣಿಕರು ಸಜೀವ ದಹನವಾಗಿದ್ದು, ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಅವಕಾಶ ವಂಚಿತ ಚೆನ್ನೈ ಮಕ್ಕಳಿಗೆ ಪ್ರವಾಸ ಭಾಗ್ಯ

ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…

2 mins ago

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

10 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

10 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

11 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

11 hours ago