ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ.
ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು 20ಕ್ಕೂ ಹೆಚ್ಚು ವಾಹನಗಳ ಮೇಲೆ ಹಾರಿಸಿದೆ. ಚಾಲಕನ ಬೇಜವಾಬ್ದಾರಿಯಿಂದ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನು ಓದಿ: ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು
ಆನೇಕಲ್ ಪಟ್ಟಣ ಸಮೀಪದ ಬೆಸ್ತಮಾನಹಳ್ಳಿಯಿಂದ ಚಂದಾಪುರದವರೆಗೆ ಸರಿಸುಮಾರು 14 ಕಿಲೋಮೀಟರ್‌ಗಳವರೆಗೆ ಕಂಟೈನರ್ ಚಾಲಕ ಬೇಜವಾಬ್ದಾರಿಯುತವಾಗಿ ಚಾಲನೆ ಮಾಡುತ್ತಾ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಗೂ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅದೃಷ್ಟವಶಾತ್, ಕಂಟೈನರ್ ಡಿಕ್ಕಿ ಹೊಡೆದ ಹೆಚ್ಚಿನ ವಾಹನಗಳು ರಸ್ತೆ ಬದಿ ಪಾರ್ಕ್ ಮಾಡಿದ್ದ ವಾಹನಗಳಾಗಿದ್ದವು. ಆ ಸಮಯದಲ್ಲಿ ವಾಹನಗಳಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಪ್ರಾಣಾಪಾಯ ತಪ್ಪಿದಂತಾಗಿದೆ.





