ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ಶನಿವಾರ ನಡೆದಿದೆ.
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ಇದನ್ನೂ ಓದಿ:-ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ
ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಏಕಾಏಕಿ ವೇಗವಾಗಿ ಬಂದ ಲಾರಿ ಅವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಢಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶಕುನಿಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.




