ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ.
ಪಕ್ಕದಲ್ಲೇ ನಿಂತಿದ್ದ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಕ್ಷಣ ಎಚ್ಚೆತ್ತುಕೊಂಡು ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿದು ಬಂದಿದೆ.
ಈ ಬಗ್ಗೆ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಅವರಿಗೆ ಬಿಪಿ ನಾರ್ಮಲ್ ಇದೆ. ರಕ್ತಸ್ರಾವದಿಂದ ಯಾವುದೇ ಸಮಸ್ಯೆಯಿಲ್ಲ. ಕುಮಾರಸ್ವಾಮಿ ದಿನಾಲೂ ಶುಗರ್ ಲೆವೆಲ್ ಚೆಕ್ ಮಾಡಿಸುತ್ತಿದ್ದರು. ಮೊದಲು ಲಂಡನ್ ಪ್ರವಾಸದಲ್ಲಿದ್ದಾಗ ಅವರಿಗೆ ರಕ್ತಸ್ರಾವ ಆಗಿತ್ತು. ಈಗ ಎರಡನೇ ಬಾರಿ ರಕ್ತಸ್ರಾವ ಆಗಿದೆ. ರಕ್ತಸ್ರಾವದಿಂದ ಅವರಿಗೆ ಏನೂ ಸಮಸ್ಯೆಯಿಲ್ಲ. ಅವರ ಆರೋಗ್ಯದಲ್ಲಿ ಏನೂ ಏರುಪೇರಾಗಿಲ್ಲ. ಅವರು ಆರಾಮಾಗಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…
ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ…
ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…