ರಾಜ್ಯ

ಸುದ್ದಿಗೋಷ್ಠಿ ನಡೆಸುವ ವೇಳೆಯೇ ಎಚ್‌ಡಿಕೆ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ.

ಪಕ್ಕದಲ್ಲೇ ನಿಂತಿದ್ದ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಕ್ಷಣ ಎಚ್ಚೆತ್ತುಕೊಂಡು ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿದು ಬಂದಿದೆ.

ಈ ಬಗ್ಗೆ ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಅವರಿಗೆ ಬಿಪಿ ನಾರ್ಮಲ್‌ ಇದೆ. ರಕ್ತಸ್ರಾವದಿಂದ ಯಾವುದೇ ಸಮಸ್ಯೆಯಿಲ್ಲ. ಕುಮಾರಸ್ವಾಮಿ ದಿನಾಲೂ ಶುಗರ್‌ ಲೆವೆಲ್‌ ಚೆಕ್‌ ಮಾಡಿಸುತ್ತಿದ್ದರು. ಮೊದಲು ಲಂಡನ್‌ ಪ್ರವಾಸದಲ್ಲಿದ್ದಾಗ ಅವರಿಗೆ ರಕ್ತಸ್ರಾವ ಆಗಿತ್ತು. ಈಗ ಎರಡನೇ ಬಾರಿ ರಕ್ತಸ್ರಾವ ಆಗಿದೆ. ರಕ್ತಸ್ರಾವದಿಂದ ಅವರಿಗೆ ಏನೂ ಸಮಸ್ಯೆಯಿಲ್ಲ. ಅವರ ಆರೋಗ್ಯದಲ್ಲಿ ಏನೂ ಏರುಪೇರಾಗಿಲ್ಲ. ಅವರು ಆರಾಮಾಗಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago