ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.ಎಸ್.ಎಂ.ಕೃಷ್ಣ ಅವರು ವಯೋಸಹಜವಾಗಿ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇಂದು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಆಸ್ಪತ್ರೆಯಲ್ಲಿ ಕೃಷ್ಣರಿಗೆ ಡಾ.ಸತ್ಯನಾರಾಯಣ ಮತ್ತು ಸುನೀಲ್‌ಕಾರಂತ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.