ರಾಜ್ಯ

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು: ಮುಂದುವರಿದ ಚಿಕಿತ್ಸೆ

ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟದ ತೊಂದರೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನರ್‌ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು.

ಕೆಲವು ದಿನಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದ್ದು, ಇಂದು ಅಥವಾ ನಾಳೆ ಡಿಸ್ಚಾರ್ಜ್‌ ಮಾಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ತಿಮ್ಮಕ್ಕ ಅವರ ಪುತ್ರ ಉಮೇಶ್‌ ಮಾಹಿತಿ ನೀಡಿದ್ದು, ತಾಯಿಗೆ 113 ವರ್ಷ, ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲು ಮಾಡಿದ್ದೆವು. ಈಗ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಇನ್ನು ನೂರಾರು ಮರಗಳ ಪಾಲನೆ ಪೋಷಣೆ ಮಾಡುವ ಮೂಲಕ ವೃಕ್ಷಮಾತೆಯೆಂದೇ ಹೆಸರಾಗಿರುವ ಸಾಲು ಮರದ ತಿಮ್ಮಕ್ಕ ಅವರು ಈವರೆಗೆ ಲಕ್ಷಾಂತರ ಸಸಿ ನೆಟ್ಟು ಪೋಷಣೆ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

23 mins ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

1 hour ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

2 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

5 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

9 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

9 hours ago