Categories: ರಾಜ್ಯ

ಆಸ್ಪತ್ರೆಗಳ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ: ಸಚಿವ ದಿನೇಶ್‌ ಗುಂಡೂರಾವ್‌

ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಶೇಕಡಾ.15ರಿಂದ 20ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ. ಇದುವರೆಗೂ ಆಸ್ಪತ್ರೆಗಳಲ್ಲಿ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

29 mins ago

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…

31 mins ago

ಓದುಗರ ಪತ್ರ: ಇರ್ವಿನ್ ರಸ್ತೆ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್‌ಗಳನ್ನು ಫುಟ್‌ಪಾತ್‌ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ…

35 mins ago

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

3 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

3 hours ago