ರಾಜ್ಯ

ಅತಿವೃಷ್ಠಿಯಿಂದ ಮನೆ, ಪ್ರಾಣ ಹಾನಿ; 48 ಗಂಟೆಯೊಳಗೆ ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಹೀಗಾಗಿ, ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಿ ಎಂದು ನಿರ್ದೇಶಿಸಿದರು.

ನೆರೆ ಪೀಡಿತ ಪ್ರದೇಶಕ್ಕೆ ಸ್ವತಃ ಜಿಲ್ಲಾಧಿಕಾರಿಗಳೇ ಭೇಟಿ ನೀಡಿ
ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು ಎಂದು ಮಾಹಿತಿ ನೀಡಿದರು.

ಈ ಬಾರಿ ಜಲವಿದ್ಯುತ್‌ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಕಣಿವೆ ಹಾಗೂ ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅತಿವೃಷ್ಠಯಿಂದ 25 ಮಂದಿ ಸಾವು
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್‌ಡಿಆರ್‌ಎಫ್‌ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು ರೂ. 6.84 ಲಕ್ಷ, ಸಣ್ಣ ಜಾನುವಾರುಗಳಿಗೆ ಒಟ್ಟು ರೂ. 2.8 ಲಕ್ಷ ಸೇರಿದಂತೆ ಒಟ್ಟು ರೂ. 9.6 ಲಕ್ಷ ಪರಿಹಾರ ಪಾವತಿಸಲಾಗಿದೆ ಎಂದರು.

ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಿ ಎಂದು ಸಿಎಂ ಸೂಚನೆ ನೀಡಿದರು.

ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ದಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಹೆಚ್ಚುವರಿ ಬಿತ್ತನೆ ಬೀಜ ಒದಗಿಸಿ
ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

4 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

4 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

5 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

5 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

5 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

14 hours ago