ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ ನಡೆಯುತ್ತಿದೆ. ಈ ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವಂತೆ ಜನಗಣತಿ ನಿರ್ದೇಶನಾಲಯ ಸೂಚನೆ ನೀಡಿದೆ.
ಈ ಮೂಲಕ ಒಂದು ವರ್ಷದಲ್ಲಿ 3ನೇ ಬಾರಿಗೆ ಗಣತಿದಾರರಾಗಿ ಕೆಲಸ ನಿಭಾಯಿಸುವ ಹೊಣೆ ಶಿಕ್ಷಕರ ಹೆಗಲೇರಲಿದೆ. ಎರಡನೇ ಹಂತದಲ್ಲಿ 2027ರ ಮಾರ್ಚ್ ತಿಂಗಳಲ್ಲಿ ಜನಸಂಖ್ಯಾ ಗಣತಿ ನಡೆಯಲಿದೆ. ಇಲ್ಲಿ ಇನ್ನೊಂದು ಮುಖ್ಯವಾದ ವಿಷಯವೆಂದರೆ, ಗಣತಿ ಮಾಡುವ ಅವಽಯಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೂಡಾ ನಡೆಯಲಿದೆ. ಈ ವೇಳೆ ಬಿಎಲ್‌ಒ ಆಗಿ ಕೆಲಸ ನಿರ್ವಹಿಸುವ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ನಿರ್ದೇಶನಾಲಯ ಸೂಚನೆ ನೀಡಿದೆ.
ಒಂದು ವೇಳೆ ಶಿಕ್ಷಕರ ಕೊರತೆ ಆದರೆ ಯಾವುದೇ ಇಲಾಖೆಯ ವೃಂದದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ. ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಗಣತಿ ನಡೆಯಲಿದೆ. ಇದಕ್ಕೆ ಪೂರಕ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳಿಗೆ 3 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…