ರಾಜ್ಯ

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ ನಡೆಯುತ್ತಿದೆ. ಈ ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವಂತೆ ಜನಗಣತಿ ನಿರ್ದೇಶನಾಲಯ ಸೂಚನೆ ನೀಡಿದೆ.

ಈ ಮೂಲಕ ಒಂದು ವರ್ಷದಲ್ಲಿ 3ನೇ ಬಾರಿಗೆ ಗಣತಿದಾರರಾಗಿ ಕೆಲಸ ನಿಭಾಯಿಸುವ ಹೊಣೆ ಶಿಕ್ಷಕರ ಹೆಗಲೇರಲಿದೆ. ಎರಡನೇ ಹಂತದಲ್ಲಿ 2027ರ ಮಾರ್ಚ್ ತಿಂಗಳಲ್ಲಿ ಜನಸಂಖ್ಯಾ ಗಣತಿ ನಡೆಯಲಿದೆ. ಇಲ್ಲಿ ಇನ್ನೊಂದು ಮುಖ್ಯವಾದ ವಿಷಯವೆಂದರೆ, ಗಣತಿ ಮಾಡುವ ಅವಽಯಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೂಡಾ ನಡೆಯಲಿದೆ. ಈ ವೇಳೆ ಬಿಎಲ್‌ಒ ಆಗಿ ಕೆಲಸ ನಿರ್ವಹಿಸುವ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ನಿರ್ದೇಶನಾಲಯ ಸೂಚನೆ ನೀಡಿದೆ.

ಒಂದು ವೇಳೆ ಶಿಕ್ಷಕರ ಕೊರತೆ ಆದರೆ ಯಾವುದೇ ಇಲಾಖೆಯ ವೃಂದದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ. ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಗಣತಿ ನಡೆಯಲಿದೆ. ಇದಕ್ಕೆ ಪೂರಕ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳಿಗೆ 3 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago