Mysore
16
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

HSRP: ಮತ್ತೊಮ್ಮೆ ಗಡುವು ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಿಕೊಳ್ಳಲು ನೀಡಿದ್ದ ಗಡುವನ್ನು ಡಿಸೆಂಬರ್‌ 31ರವರೆಗೆ ಮತ್ತೊಮ್ಮೆ ವಿಸ್ತರಣೆ ಮಾಡಿದೆ.

ರಾಜ್ಯದಲ್ಲಿ ಪ್ರತಿಯೊಂದು ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅನ್ನು ಅವಳಡಿಸುವಂತೆ ಡಿಸೆಂಬರ್‌ 4 ರಂದು ಕೊನೆಯ ದಿನವಾಗಿತ್ತು. ಆದರೆ ಸರ್ಕಾರ ಇದೀಗ ಮತ್ತೆ ಡಿಸೆಂಬರ್‌ 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಇದುವರೆಗೂ ಸುಮಾರು 55 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅನ್ನು ಅಳವಡಿಕೆ ಮಾಡಿಕೊಂಡಿದ್ದು, ಇನ್ನು ಎರಡು ಕೋಟಿಗಳಷ್ಟು ವಾಹನಗಳು ನಂಬರ್‌ ಪ್ಲೇಟ್‌ನ್ನು ಅಳವಡಿಸಿಕೊಳ್ಳಬೇಕಿತ್ತು. ಹೀಗಾಗಿ ನಿಗಧಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

 

Tags:
error: Content is protected !!