ಬೆಂಗಳೂರು: ರಾಜ್ಯ ಸರ್ಕಾರ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ನೀಡಿದ್ದ ಗಡುವನ್ನು ಡಿಸೆಂಬರ್ 31ರವರೆಗೆ ಮತ್ತೊಮ್ಮೆ ವಿಸ್ತರಣೆ ಮಾಡಿದೆ.
ರಾಜ್ಯದಲ್ಲಿ ಪ್ರತಿಯೊಂದು ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅವಳಡಿಸುವಂತೆ ಡಿಸೆಂಬರ್ 4 ರಂದು ಕೊನೆಯ ದಿನವಾಗಿತ್ತು. ಆದರೆ ಸರ್ಕಾರ ಇದೀಗ ಮತ್ತೆ ಡಿಸೆಂಬರ್ 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಇದುವರೆಗೂ ಸುಮಾರು 55 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಂಡಿದ್ದು, ಇನ್ನು ಎರಡು ಕೋಟಿಗಳಷ್ಟು ವಾಹನಗಳು ನಂಬರ್ ಪ್ಲೇಟ್‌ನ್ನು ಅಳವಡಿಸಿಕೊಳ್ಳಬೇಕಿತ್ತು. ಹೀಗಾಗಿ ನಿಗಧಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…