ಬೆಂಗಳೂರು: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್(ಎಚ್‌ಎಸ್‌ಆರ್‌ಪಿ) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸೋಮವಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ 3-4 ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಗಡುವು ವಿಸ್ತರಣೆ ಮಾಡಿದ್ದು, ಈ ತಿಂಗಳ ಕೊನೆಯವರೆಗೆ ಅಂದರೆ ನ.30 ರವರೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ಆದೇಶ ಹೊರಡಿಸಿದೆ.
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಬಂದಿದೆ. ಬರೋಬ್ಬರಿ ನಾಲ್ಕು ಬಾರಿ ಗಡುವು ವಿಸ್ತರಿಸಿದೆ. ಆದರೂ ಸಹ 1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಇನ್ನೂ ಬಾಕಿ ವಾಹನಗಳ ಮಾಲೀಕರು ಅಳವಡಿಕೆ ಮಾಡಿಕೊಂಡಿಲ್ಲ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಇದೀಗ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.
ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಹೀಗಾಗಿ 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ.
ದ್ವಿಚಕ್ರ ವಾಹನ, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ.
ಮಾಗಿದ ಹಣ್ಣಲ್ಲ ಮಂತ್ರಕ್ಕೆ ಉದುರಿದ ಹಣ್ಣಲ್ಲ ಗುದ್ದಿ ಗುದ್ದಿ ಮಾಗಿಸಿದ ಹಣ್ಣು ಮತ್ತೆ ಮೈಮರೆತರೆ ಕೈಯಿಂದಲೇ ಮಾಯವಾಗುವ ಹಣ್ಣು ಕೈಗೆ…
ನಕಲಿ ನೋಟುಗಳು, ನಕಲಿ ಆಹಾರ ಪದಾರ್ಥಗಳು, ನಕಲಿ ದಾಖಲೆಗಳು, ನಕಲಿ ಅಧಿಕಾರಿಗಳು, ನಕಲಿ ಪೊಲೀಸರು, ನಕಲಿ ಸುದ್ದಿ ವಾಹಿನಿಗಳು ಅಷ್ಟೇ…
ಚನ್ನಪಟ್ಟಣದ ಕಲ್ಪಶ್ರೀ ಪ್ರದರ್ಶನ ಕಲೆಗಳು ಕೇಂದ್ರ ಟ್ರಸ್ಟ್ ವತಿಯಿಂದ ನವಂಬರ್ 5ರ ಸಂಜೆ 5.30ಕ್ಕೆ ಮಲೇಷಿಯಾದ ಕೌಲಾಲಂಪುರದ ಸುಭಾಷ್ ಚಂದ್ರ…
ಮಡಿಕೇರಿ: ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ನಡೆಯುವುದರಿಂದ ಮಧ್ಯಾಹ್ನ 2 ಗಂಟೆ ಬಳಿಕ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ…
ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಹುಲಿ ಸೆರೆಗೆ ದಸರಾ ಆನೆ ಮಹೇಂದ್ರನನ್ನು ಬಳಸಿಕೊಳ್ಳಲಾಗಿದೆ.…