Mysore
19
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ಅಮಾನತು

ಹುಬ್ಬಳ್ಳಿ:  ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್‌ ಅವರನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆ  ಅಮಾನತು ಮಾಡಿ ಸರ್ಕಾರ  ಆದೇಶ ಹೊರಡಿಸಿದೆ.

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೆಣ್ಣು ಮಕ್ಕಳು ಸಾರ್ವಜನಿಕರು ಭಯಭೀತಿಯಲ್ಲಿ ಇದ್ದಾರೆ.  ಪೊಲೀಸ್‌ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನಡೆ ಸಾಧಿಸಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿ, ಅಂಜಲಿ ಹತ್ಯೆಗೆ ಪೊಲೀಸರ ನಿರ್ಲಕ್ಷದ ಆರೋಪ ಕೇಳಿ ಬಂದಿತ್ತು.

ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ  ಆರೋಪ ಕೇಳಿ ಬಂದ ಹಿನ್ನಲೆ ಇತ್ತೀಚೆಗೆ ಬೆಂಡಿಗೇರಿ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಚಂದ್ರಶೇಖರ್‌ ಚಿಕ್ಕೋಡಿ, ಹೆಡ್‌ಕಾನ್ಸ್‌ಟೇಬಲ್‌ ರೇಖಾ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ಪಿ.ರಾಜೀವ್‌ ಅವರನ್ನು ಸಹ ಅಮಾನತು ಮಾಡಲಾಗಿದೆ. ಆ ಮೂಲಕ ಅಂಜಲಿ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Tags:
error: Content is protected !!