ಹುಬ್ಬಳ್ಳಿ: ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೆಣ್ಣು ಮಕ್ಕಳು ಸಾರ್ವಜನಿಕರು ಭಯಭೀತಿಯಲ್ಲಿ ಇದ್ದಾರೆ. ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನಡೆ ಸಾಧಿಸಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿ, ಅಂಜಲಿ ಹತ್ಯೆಗೆ ಪೊಲೀಸರ ನಿರ್ಲಕ್ಷದ ಆರೋಪ ಕೇಳಿ ಬಂದಿತ್ತು.
ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ ಆರೋಪ ಕೇಳಿ ಬಂದ ಹಿನ್ನಲೆ ಇತ್ತೀಚೆಗೆ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಚಿಕ್ಕೋಡಿ, ಹೆಡ್‌ಕಾನ್ಸ್‌ಟೇಬಲ್ ರೇಖಾ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ಪಿ.ರಾಜೀವ್ ಅವರನ್ನು ಸಹ ಅಮಾನತು ಮಾಡಲಾಗಿದೆ. ಆ ಮೂಲಕ ಅಂಜಲಿ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ…
ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ…
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…
ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…