Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ವಿಷ್ಣುವರ್ಧನ್‌ ಸ್ಮಾರಕ ಉಳಿಸಲು ಭಾರಿ ಪ್ರತಿಭಟನೆ

ಬೆಂಗಳೂರು : ಕನ್ನಡದ ಚಿತ್ರರಂಗದ ಖ್ಯಾತ ಹೆಸರಾಂತ ನಟ ದಿವಂಗತ ಡಾಕ್ಟರ್ ವಿಷ್ಣುವರ್ಧನ್ ಅವರ ಸ್ಮಾರಕ ಜಾಗವನ್ನು ಉಳಿಸಿಕೊಳ್ಳಲು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವು ಸಂಘ ಸಂಸ್ಥೆಗಳು ಹಾಗೂ ಡಾಕ್ಟರ್ ವಿಷ್ಣುವರ್ಧನ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ ಜರುಗಿತು.

ಖ್ಯಾತ ನಟ ಸಾಹಸ ಸಿಂಹ ಡಾ. ವಿಷ್ಣುವರ್ಧನ್​ ಅವರ ಅಂತ್ಯಕ್ರಿಯೆ ನಡೆದ ಜಾಗ ಒಂದು ಪವಿತ್ರ ಸ್ಥಳ ಎಂಬುದು ಅಭಿಮಾನಿಗಳ ನಂಬಿಕೆ. ಆ ಪುಣ್ಯಭೂಮಿಗೆ ಭೇಟಿ ನೀಡಲು ಈಗ ಅಭಿಮಾನಿಗಳಿಗೆ ಅವಕಾಶ ಸಿಗುತ್ತಿಲ್ಲ.ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಆಗಿದೆ. ಆದರೆ ಅಭಿಮಾನ್​ ಸ್ಟುಡಿಯೋದಲ್ಲಿ ಇರುವ ಪುಣ್ಯಭೂಮಿ ಜೊತೆ ಫ್ಯಾನ್ಸ್​ ಭಾವನಾತ್ಮಕ ನಂಟು ಹೊಂದಿದ್ದಾರೆ.

ಆ ಪುಣ್ಯಭೂಮಿಯನ್ನು ಉಳಿಸಿಕೊಳ್ಳುವ ಸಲುವಾಗಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ವಿಷ್ಣುವರ್ಧನ್​ ಅಭಿಮಾನಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ಅನೇಕ ಸಂಘ, ಸಂಸ್ಥೆಗಳು ಬೆಂಬಲ ನೀಡಿವೆ. ಕಿಚ್ಚ ಸುದೀಪ್​, ಡಾಲಿ ಧನಂಜಯ್​ ಮುಂತಾದ ನಟರು ಕೂಡ ಬೆಂಬಲ ಸೂಚಿಸಿದ್ದಾರೆ.

ಡಾ. ವಿಷ್ಣುವರ್ಧನ್​ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಒತ್ತಾಯ ಕೂಡ ಮಾಡಲಾಗುತ್ತಿದೆ. ಕಿಚ್ಚ ಸುದೀಪ್​ ಅವರು ಇಂದು ಕೆಸಿಸಿ ಕ್ರಿಕೆಟ್​ ಟೂರ್ನಿಗೆ ಆಹ್ವಾನ ನೀಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ವಿಷ್ಣು ಅಭಿಮಾನಿಗಳ ಹೋರಾಟದ ಬಗ್ಗೆಯೂ ಚರ್ಚೆ ಮಾಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ