ಬೆಂಗಳೂರು: ಆರ್‌ಎಸ್‌ಎಸ್ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
10ಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನ ಧಾರವಾಡ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು.
ಇದನ್ನು ಓದಿ: ಆರ್‌ಎಸ್‌ಎಸ್ ಪಥಚಂಚಲನ ; ಹೈಕೋರ್ಟ್ ಷರತ್ತುಬದ್ಧ ಅನುಮತಿ
ಇದರ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಹುಬ್ಬಳ್ಳಿ ಕಮಿಷನರ್‌ಗೆ ನೋಟಿಸ್ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್.17ಕ್ಕೆ ಮುಂದೂಡಿಕೆ ಮಾಡಿದೆ.





