ನಿನ್ನೆ ( ಫೆಬ್ರವರಿ 1 ) ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಡೆಸಿದ 28ನೇ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಭಾರೀ ಹಿನ್ನಡೆಯುಂಟಾಗಿದೆ. ಮೇಕೆದಾಟು ಯೋಜನೆಯ ಪ್ರಸ್ತಾವವನ್ನು ಕಾವೇರಿ ಜಲ ಆಯೋಗಕ್ಕೆ ಹಿಂತಿರುಗಿಸುವ ಅಭಿಪ್ರಾಯವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಬಹುತೇಕ ಸದಸ್ಯರು ವ್ಯಕ್ತಪಡಿಸಿದ್ದಾರೆ.
ಈ ಸಭೆಯಲ್ಲಿ ಕರ್ನಾಟಕವು ಸಭೆಯ ಕಾರ್ಯಸೂಚಿಯನ್ನು ಮುಂದೂಡದೇ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿತು. ಆದರೆ ಇದಕ್ಕೆ ತಮಿಳುನಾಡು ಹಾಗೂ ಪುದುಚೆರಿ ಆಕ್ಷೇಪ ವ್ಯಕ್ತಪಡಿಸಿದವು.
ರಾಜ್ಯ ಹೇಳಿದ್ದೇನು?
ಕರ್ನಾಟಕದ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಸಲ್ಲಿಕೆಗಳನ್ನು ಪರಿಗಣಿಸಿ, ಪರಿಣತ ಸಂಸ್ಥೆಯು ಸಂಕಷ್ಟದ ವರ್ಷಗಳಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಮೇಕೆದಾಟು ಯೋಜನೆಯನ್ನು ಪರಿಗಣಿಸಬೇಕು ಹಾಗೂ ನಿರ್ಧರಿಸಬೇಕು ಎಂದು ಮನವಿ ಮಾಡಿದರು. ಅಲ್ಲದೇ ಮೇಕೆದಾಟು ನಿರ್ಮಾಣದ ಕುರಿತು ನ್ಯಾಯಾಧೀಕರಣದ ತೀರ್ಪಿನಲ್ಲಿ ಅಥವಾ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಯಾವುದೇ ನಿರ್ಬಂಧ ಹಾಗೂ ಅಡೆತಡೆಗಳಿಲ್ಲ ಎಂಬ ಅಂಶವನ್ನು ಉಲ್ಲೇಖಿಸಿ ಗಮನ ಸೆಳೆಯಿತು. ಯೋಜನೆಯ ಸಂಕ್ಷಿಪ್ತ ವರದಿ ಬಗ್ಗೆ ಸೂಕ್ತ ನಿಲುವು ತೆಗೆದುಕೊಳ್ಳಬೇಕು ಮತ್ತು ಈ ಯೋಜನೆಯ ವರದಿ ಯಾವುದೇ ನಿಬಂಧನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಕೇಂದ್ರ ಜಲ ಆಯೊಗಕ್ಕೆ ಅಭಿಪ್ರಾಯಗಳನ್ನು ರವಾನಿಸುವಂತೆ ಮನವಿ ಮಾಡಿತು.
ಕೊನೆಗೆ ಮೇಕೆದಾಟು ಯೋಜನೆ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿದ್ದು, ಪ್ರಾಧಿಕಾರದಲ್ಲಿ ಯೋಜನೆಯ ಚರ್ಚೆಗೆ ಸುಪ್ರೀಂನಿಂದ ಯಾವುದೇ ನಿರ್ಬಂಧವಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೇಂದ್ರ ಜಲಶಕ್ತಿ ಸಚಿವಾಲಯದ ಸದಸ್ಯರು ಅಭಿಪ್ರಾಯಪಟ್ಟರು. ಬಳಿಕ ಪ್ರಾಧಿಕಾರದ ಎಲ್ಲ ಸದಸ್ಯರ ಅಭಿಪ್ರಾಯ ಪಡೆಯಲಾಯಿತು.
ಬೆಂಗಳೂರು: ವರ್ಷಾಂತ್ಯ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯದಾದ್ಯಂತ ಮದ್ಯ ಮಾರಾಟ ಭರ್ಜರಿಯಾಗಿ ನಡೆದಿದ್ದು, ಕೋಟಿ ಕೋಟಿ ಮೊತ್ತ ಸಂಗ್ರಹವಾಗಿದೆ.…
ಮೈಸೂರು: ಕಷ್ಟ ಎನ್ನುವ ಭ್ರಮೆಯನ್ನು ಕಳಚಿದರೆ ಯಶಸ್ಸು ಕೈಹಿಡಿಯುತ್ತದೆ. ನಿರಂತರ ಕಠಿಣ ಪರಿಶ್ರಮದಿಂದ ಅಸಾಧ್ಯವಾದುದನ್ನು ಸಾಧಿಸಬಹುದು. ಯಶಸ್ಸಿಗೆ ಆತ್ಮವಿಶ್ವಾಸ ಮುಖ್ಯ…
ಮೈಸೂರು: ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಅಂಬೇಡ್ಕರ್…
ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ…
ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ…
ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮಗಳ ಬಸ್ ಪ್ರಯಾಣ ಟಿಕೆಟ್ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ…