ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನದಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಸೋಮವಾರ (ಆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್,ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಜಾರ್ಖಂಡ್ ಅರಣ್ಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಈ ಸಮ್ಮೇಳನದಲ್ಲಿ ಅಮೇರಿಕಾ, ಜರ್ಮನಿ, ಜಪಾನ್, ಇಂಗ್ಲೆಂಡ್ ಸೇರಿದಂತೆ 11ದೇಶಗಳಿಂದ 17ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹಾಗೂ ದೇಶಾದ್ಯಂತ 660ಕ್ಕೂ ಹೆಚ್ಚಿ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಇನ್ನು ವನ್ಯ ಜೀವಿಗಳು ನಾಡಿಗೆ ಬರದಂತೆ ಬೇರೆ-ಬೇರೆ ರಾಜ್ಯಗಳು ಹಾಗೂ ದೇಶಗಳು ಅನುಸರಿಸುತ್ತಿರುವ ತಂತ್ರಗಾರಿಕೆ, ಪದ್ಧತಿಗಳ ಬಗ್ಗೆ ಈ ಸಮ್ಮೇಳನದಲ್ಲಿ ಚಿಂತನ ಮಂಥನ ನಡೆಯಲಿದೆ.