ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು.
ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ಅರಣ್ಯ ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದರು.
ಕಾಡು ಪ್ರಾಣಿಗಳ ಮತ್ತು ಮಾನವರ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಮತ್ತು ಇವುಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ. ಅರಣ್ಯ ಇಲಾಖೆ ಬಳಿಯೂ ಸಾಕಷ್ಟು ಹಣ ಇದೆ. ಅಗತ್ಯಬಿದ್ದರೆ ಸರ್ಕಾರ ಕೂಡ ಹಣ ಕೊಡಲು ಸಿದ್ದವಿದೆ. ಆದ್ದರಿಂದ ಸಮರ್ಪಕವಾಗಿ ಬ್ಯಾರಿಕೇಡ್ ನಿರ್ಮಿಸಿ ಆನೆ-ಮಾನವ ಸಂಘರ್ಷ ತಪ್ಪಿಸಬೇಕು ಎಂದರು.
ಹಿರಿಯ ಅಧಿಕಾರಿಗಳು ಆಗಿಂದ್ದಾಗೇ ಕಾಡಿಗೆ ಭೇಟಿ ನೀಡಿ, ಹೆಚ್ಚೆಚ್ಚು ಕಾಡಿನಲ್ಲೇ ಉಳಿಯಬೇಕು. ಆಗ ಮಾತ್ರ ಕೆಳ ಹಂತದ ಸಿಬ್ಬಂದಿ ಕೂಡ ಕಾಡೊಳಗೇ ಇದ್ದು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.
ಈ ವೇಳೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…