ರಾಜ್ಯ

ಮಾನವ-ವನ್ಯಪ್ರಾಣಿ ಸಂಘರ್ಷ : ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ; ಸಿಎಂ ಭರವಸೆ

ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು.

ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು ಎಂದರು.‌

ಅಣಕು ಪ್ರದರ್ಶನ:
ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸುವುದು.

ಇದನ್ನೂ ಓದಿ:-ಕಟ್ಟೆ ಹೊಡೆದ ಆಕ್ರೋಶ ; ಕಬ್ಬು ತುಂಬಿದ ಟ್ರ್ಯಾಕ್ಟರ್‌ ಉರುಳಿಸಿ ಬೆಂಕಿ ಹಚ್ಚಿದ ರೈತರು

ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ
ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯುವುದು,ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸುವುದು.

ಸಭೆಯಲ್ಲಿ ಚರ್ಚೆಗೆ ಬಂದ ಇತರೆ ಪ್ರಮುಖ ಸಂಗತಿಗಳು…

ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6395 ಇದ್ದು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ
ಹುಲಿ ಸಂಖ್ಯೆ 563 ಇದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ
ಹಾಗೂ 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.
ವನ್ಯಜೀವಿ ಹಾವಳಿಯಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2022-23ರಲ್ಲಿ 57,
2023-24ರಲ್ಲಿ 65, 2024-25ರಲ್ಲಿ 46, 2025-26ರಲ್ಲಿ 32 ಮಾನವ ಜೀವ ಹಾನಿ ಸಂಭವಿಸಿದೆ.
ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿದೆ.
ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25 ರಲ್ಲಿ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ 30% ಕಡಿತವಾಗಿದೆ.
ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು.‌ ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು

ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಾಂಟಾನ ಕಳೆ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳ ಮೇವಿಗೆ ಕೊರತೆ ಉಂಟಾಗುತ್ತದೆ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

2 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

2 hours ago