Mysore
30
few clouds

Social Media

ಬುಧವಾರ, 15 ಏಪ್ರಿಲ 2026
Light
Dark

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ ಕನ್ನಡ ಸಾಮರಸ್ಯದ ನೆಲೆಗಳ 41 ಕೃತಿಗಳ ಲೋಕಾರ್ಪಣೆ ಮಾಡಿ ಮಾತನಾಡಿದರು.

ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ನೂರು ಪುಸ್ತಕಗಳನ್ನು ಹೊರತರಲು ಉದ್ದೇಶಿಸಿದ್ದು, ಉಳಿದ 59 ಪುಸ್ತಕಗಳು ಸಹ ಶೀಘ್ರ ಬಿಡುಗಡೆಯಾಗಲಿದ್ದು ಇಂದು ಬಿಡುಗಡೆಯಾಗಿರುವ ಎಲ್ಲವೂ ಯೋಗ್ಯವಾದ ಪುಸ್ತಕಗಳಾಗಿವೆ. ನಮ್ಮ ದೇಶದಲ್ಲಿ ಅನೇಕ ಭಾಷೆ ಧರ್ಮ ಸಂಸ್ಕೃತಿಗಳು ಇದ್ದು, ರಾಜ್ಯದಲ್ಲಿಯೂ ವೈವಿಧ್ಯತೆ ಇದೆ. ಇದರಲ್ಲಿಯೇ ಏಕತೆಯನ್ನು ನಾವು ಸಾಧಿಸಿದ್ದೇವೆ ಎಂದರು.

ಬಸವ, ಬಾಬಾ ಸಾಹೇಬ್ ಅಂಬೇಡ್ಕರ್, ಬುದ್ಧನಿಂದ ಹಿಡಿದು ಅನೇಕರು ಸಮಾಜ ಸುಧಾರಣೆ ಮಾಡಲು ಪ್ರಯತ್ನಿಸಿದ್ದಾರೆ. ಸಂವಿಧಾನ ಜಾರಿಯಾದ ನಂತರ ಸಮಾಜದ ಸುಧಾರಣೆಯಲ್ಲಿ ವೇಗ ಹೆಚ್ಚಿದೆ ಯಾದರೂ ಸಾಮಾಜಿಕ ವ್ಯವಸ್ಥೆ ನೂರಕ್ಕೆ ನೂರು ಬದಲಾವಣೆಯಾಗಿಲ್ಲ ಎಂದರು.

ಯುವಕರಲ್ಲಿ ಮಾನವೀಯತೆ ಹೆಚ್ಚಾಗಬೇಕೆನ್ನುವ ನಿಟ್ಟಿನಲ್ಲಿ ಇಂದು ಬಿಡುಗಡೆಯಾಗಿರುವ ಪುಸ್ತಕಗಳು ಪ್ರಯೋಜನಕಾರಿಯಾಗಲಿವೆ. ಇವು ಯುವಜನರನ್ನು ತಲುಪದೇ ಹೋದರೆ, ಅದರಿಂದ ಬದಲಾವಣೆಯಾಗದೆ ಹೋದರೆ ಅದರ ಉದ್ದೇಶ ಸಫಲವಾಗುವುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ರಿಜ್ವಾನ್ ಅರ್ಷದ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿ ಮಲೆ, ಮೇಲ್ಮನೆ ಸದಸ್ಯ ಭೋಜೆ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುನಾಥ್, ಉಪಸ್ಥಿತರಿದ್ದರು.

 

 

Tags:
error: Content is protected !!