ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್.ಸಿ. ಸಿಟಿ ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ ಚಳಗಾಲದ ಅಧಿವೇಶನದ ಸಮಯದಲ್ಲಿ ವಿಧಾನ ಪರಿಷತ್‌ನಲ್ಲಿ ನಡೆದ ಘಟನೆಯ ತನಿಖೆ ಇನ್ನು ಪ್ರಗತಿಯಲ್ಲಿದೆ. ಆದರು ಅವರನ್ನು ಕಾನೂನು ಬಾಹಿರವಾಗಿ ಪೊಲೀಸರು ಬಂಧಿಸಿ ರಾತ್ರಿಯೆಲ್ಲಾ ಸುತ್ತಾಡಿಸುವ ಮೂಲಕ ತುಂಬಾ ತೊಂದರೆ ನೀಡಿದ್ದರು.
ಈಗ ಸಚಿವೆ ಹತ್ತಿರ ಕ್ಷಮೆ ಕೇಳುವಂತೆ ಅವರಿಗೆ ಬೆದರಿಕೆ ಪತ್ರ ಬರೆಯಲಾಗಿದೆ. ಇದರಿಂದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದೆಗೆಟ್ಟಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ರವಿ ಮೇಲೆ ಗೂಂಡಾಗಿರಿ ಮಾಡಿದವರು ಮತ್ತು ಬೆದರಿಕೆ ಪತ್ರ ಬರೆದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಭೇಟಿ ಕುರಿತು ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇನೆ. ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಸೇವೆ ಬೆಳಗಾವಿಗೆ ವಿಸ್ತರಣೆ ಆಗಿಲ್ಲ. ತಾವು ಮಧ್ಯೆ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಬೇಕು. ಜೊತೆಗೆ ಉಡಾನ್ ಯೋಜನೆ ಮುಂದುವರಿಸುವಂತೆ ಕೋರಿದ್ದೇನೆ ಎಂದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…