Mysore
27
clear sky

Social Media

ಭಾನುವಾರ, 19 ಏಪ್ರಿಲ 2026
Light
Dark

ಜೆ.ಪಿ.ನಡ್ಡಾಗಿಂತ ನಾನು ಸೆನ್ಸಿಬಲ್‌ ರಾಜಕಾರಣಿ ಎಂದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಜೆ.ಪಿ.ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆ.ಪಿ.ನಡ್ಡಾಗಿಂತ ನಾನು ಸೆನ್ಸಿಬಲ್‌ ರಾಜಕಾರಣಿ. ನಮ್ಮದು ರಾಷ್ಟ್ರೀಯ ಪಕ್ಷ. ನಾನು 36 ವರ್ಷ ಶಾಸಕ. ಸಂವಿಧಾನ ಏನು ಹೇಳುತ್ತದೆ ಎಂಬ ಪರಿಜ್ಞಾನ ನನಗೆ ಇದೆ ಎಂದರು.

ಇನ್ನು ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಇದು ರಾಜಕೀಯ ಪಿತೂರಿ. ಮುಸ್ಲಿಂ ಕೋಟಾ ಬಗ್ಗೆ ನ್ಯಾಯಾಲಯದ ತೀರ್ಪುಗಳ ಬಗ್ಗೆ ಹೇಳಿದ್ದೇನೆ. ಸಂವಿಧಾನ ಬದಲಾವಣೆ ಬಗ್ಗೆ ಎಲ್ಲಿ ಮಾತನಾಡಿದ್ದೇನೆ ಎಂದು ಪ್ರಶ್ನೆ ಮಾಡಿದರು.

ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲಾ ನಮ್ಮ ಬಳಿ ನಡೆಯಲ್ಲ ಎಂದು ಕಿಡಿಕಾರಿದರು.

 

Tags:
error: Content is protected !!