ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ, ಅಧಿಕೃತವಾಗಿ ಘೋಷಣೆಯಾಗಬೇಕಿರುವುದೇ ಬಾಕಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಅವರು ನನ್ನನ್ನೆ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಕಳೆದ ವಾರ ಅವರನ್ನ ಭೇಟಿ ಮಾಡಿ ಚರ್ಚೆಮಾಡಿದ್ದೇನೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್ ನವರು ಚುನಾವಣೆಗೆ ಹೋಗ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ. ಅದಕ್ಕೆ ಎಚ್‌ಡಿಕೆ ನನ್ನನ್ನೆ ನಿಲ್ಲುವಂತೆ ಹೇಳಿದ್ದಾರೆ. ಆದರೆ ಅಧಿಕೃತ ಅನುಮೋದನೆ ಸಿಗಬೇಕು ಅಷ್ಟೇ. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು ಎಂದು ತಿಳಿಸಿದರು.
ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಯಿಂದ ಗೆದ್ದು ಕೇಂದ್ರ ಮಂತ್ರಿಯಾಗಿದ್ದಾರೆ. ಬಹಳ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ. ಎಚ್ ಡಿ ಕೆ ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೆ ಕಾಣುತ್ತಿರಲಿಲ್ಲ. ಚನ್ನಪಟ್ಟಣ ಜನ ನನ್ನನ್ನ ಕೈ ಬಿಡುತ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ . ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು ಎಂದು ಸಿಪಿವೈ ಹೇಳಿದರು
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…